ಹೊಸ ʻAPL-BPLʼ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌

ಬೆಳಗಾವಿ : ಹೊಸದಾಗಿ ಬಿಪಿಎಲ್‌, ಎಪಿಎಲ್‌ ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್.‌ ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಆದ್ಯತೆ ಮೇರೆಗೆ ಪಡಿತರ ಚೀಟಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಧಾಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಕೆ.ಹೆಚ್.‌ ಮುನಿಯಪ್ಪ, ಅದ್ಯತೆ ಮೇರೆಗೆ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಾಗಿ ಪ್ರತಿ ತಿಂಗಳ 1 ತಾರೀಖಿನಿಂದ 10ನೇ ತಾರೀಖಿನವರೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಮೈಸೂರು, ಮಂಗಳೂರು ಸೇರಿ ರಾಜ್ಯದಲ್ಲಿ ಪ್ರತಿ ತಿಂಗಳು 10ನೇ ತಾರೀಖಿವರೆಗೂ ತಿದು ಪಡಿಗೆ ದಿನಾಂಕ ವಿಸ್ತರಣೆ ಮಾಡ ಲಾಗಿದೆ. ಕಳೆದ 6 ತಿಂಗಳಲ್ಲಿ 16,79604 ಅರ್ಜಿಗಳನ್ನು ತಿದ್ದು ಪಡಿ ಮಾಡಲಾಗಿದ್ದು, ಸರ್ವೇಯಲ್ಲಿನ ತಾಂತ್ರಿಕ ತೊಂದರೆ ಯಿಂದಾಗಿ ಹೆಚ್ಚಿನ ಅರ್ಜಿ ಸ್ವೀಕರಿಸಲು ಆಗುತ್ತಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read