ಕೇರಳ : ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದ ತಮಿಳುನಾಡಿನ 11 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಯಾತ್ರಾರ್ಥಿಗಳ ಭಾರಿ ದಟ್ಟಣೆಯ ನಡುವೆ ಕುಸಿದುಬಿದ್ದಿದ್ದು, ಆಸ್ಪತ್ರೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.ಮೂರು ವರ್ಷದವಳಿದ್ದಾಗಿನಿಂದ ಈ ರೋಗದ ವಿರುದ್ಧ ಹೋರಾಡುತ್ತಿದ್ದ ಬಾಲಕಿ, ಯಾತ್ರಾರ್ಥಿಗಳ ಭಾರಿ ದಟ್ಟಣೆಯ ನಡುವೆ ಕುಸಿದುಬಿದ್ದಳು . ಬಾಲಕಿ ಸಾವಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.
ಪ್ರಸಿದ್ಧ ಶಬರಿಮಲೆ ದೇವಸ್ಥಾನದಲ್ಲಿ ಯಾತ್ರಾರ್ಥಿಗಳ ನೂಕು ನುಗ್ಗಲು ಉಂಟಾಗಿದ್ದು, ಶಬರಿಮಲೆಯಲ್ಲಿ ಅವ್ಯವಸ್ಥೆಗಳ ಆಗರವಾಗಿದೆ.