ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ , ಶೀಘ್ರವೇ ರಾಜ್ಯ ಸರ್ಕಾರದಿಂದ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ನಡೆಯಲಿದೆ.
50 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಅತೀ ಶೀಘ್ರದಲ್ಲಿಯೇ ನಿರೀಕ್ಷಿಸಬಹುದು.ಈ ಹುದ್ದೆಗಳನ್ನುಈ ಮೊದಲು PUC ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿತ್ತು, ಆದರೆ ಇದೀಗ ಅದರ ಬದಲು KEA /KPSC ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಭರ್ತಿ ಮಾಡಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡಲು ಪ್ರಸ್ತುತ ಇರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಖಾಲಿಯರುವ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ಹುದ್ದೆಗಳನ್ನು ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು.
ಪ್ರಸ್ತುತ ಖಾಲಿ ಇರುವ 1,839 ಹುದ್ದೆಗಳ ವಿಭಾಗವಾರು, ಜಿಲ್ಲಾವಾರು & ತಾಲ್ಲೂಕಾವಾರು ಸಂಪೂರ್ಣ ಮಾಹಿತಿ ಇಲ್ಲಿದೆ.
![](https://kannadadunia.com/wp-content/uploads/2023/12/409871467_688637240040458_6009729180881831656_n-1.jpg)
![](https://kannadadunia.com/wp-content/uploads/2023/12/2-2.jpg)
![](https://kannadadunia.com/wp-content/uploads/2023/12/3-1.jpg)
![](https://kannadadunia.com/wp-content/uploads/2023/12/4-2.jpg)
![](https://kannadadunia.com/wp-content/uploads/2023/12/5-1.jpg)
![](https://kannadadunia.com/wp-content/uploads/2023/12/6.jpg)