HomeKarnatakaಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538...

ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538 ಜನರಿಗೆ ಉದ್ಯೋಗ ಸೃಷ್ಟಿ

ಬೆಳಗಾವಿ : ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉತ್ತರ ಕರ್ನಾಟಕದ  ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆಗಳಿಂದ ಒಟ್ಟು ರೂ. 9,461  ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ  ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ ಉಪಕ್ರಮದ ಭಾಗವಾಗಿವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular