
ಆತ್ಮಹತ್ಯೆ ಮಾಡಿಕೊಂಡಿವರನ್ನು ಚಂದ್ರಶೇಖರ್ ರೆಡ್ಡಿ (25) ಎಂದು ಗುರುತಿಸಲಾಗಿದೆ . ಈರಣ್ಣನ ಎಂಬಾತನ ಪತ್ನಿ ಜೊತೆ ಚಂದ್ರಶೇಖರ್ ಅನೈತಿಕ ಸಂಬಂಧ ಹೊಂದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಶಂಕಿಸಿ ಯುವಕನ ಮೇಲೆ ಈರಣ್ಣ ಹಲ್ಲೆ ಮಾಡಿದ್ದಾನೆ ಎಂದು ಆರೋಪ ಕೇಳಿ ಬಂದಿದೆ.
ನಂತರ ಮರಕ್ಕೆ ಕಟ್ಟಿ ಹಾಕಿ ಚಂದ್ರಶೇಖರ್ ರೆಡ್ಡಿ ಮೇಲೆ ಹಲ್ಲೆ ನಡೆಸಲಾಗಿದ್ದು, ,. ಇದರಿಂದ ಮರ್ಯಾದೆಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.ಈರಣ್ಣ ಸೇರಿ ಎಂಟು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

