
ಹೌದು, ಬ್ಯಾಚುಲರ್ ಪಾರ್ಟಿ ಎಂಬ ಹೊಸ ಸಿನಿಮಾ ಮಾಡುತ್ತಿರುವುದಾಗಿ ನಟ ರಕ್ಷಿತ್ ಶೆಟ್ಟಿ ಹೇಳಿದ್ದಾರೆ.
ತಮ್ಮದೇ ಬ್ಯಾನರ್ ನಲ್ಲಿ ಹೊಸ ಸಿನಿಮಾ ಬರುತ್ತಿದ್ದು, ಸದ್ಯದಲ್ಲೇ ಹೊಸ ಪಾರ್ಟಿ ಕೊಡ್ತೀನಿ ಎಂದು ಬರೆದುಕೊಂಡಿದ್ದಾರೆ.
ಇದೊಂದು ಹಾಸ್ಯಪ್ರಧಾನ ಚಿತ್ರವಾಗಿದೆ. ಚಿತ್ರದಲ್ಲಿ ನಟ ದಿಗಂತ್ ಮಂಚಾಲೆ, ರಂಗಾಯಣ ರಘು, ಅಚ್ಯುತ್ ಕುಮಾರ್, ಸಿರಿ ರವಿಕುಮಾರ್ ಮತ್ತಿತರರು ತೆರೆ ಹಂಚಿಕೊಳ್ಳಲಿದ್ದಾರೆ.

