ಬೆಳಗಾವಿ : ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಅಮಿತ್ ಶಾ ಹೊರಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದರು.
ಅಧಿವೇಶನದಲ್ಲಿ ಧ್ವನಿ ಎತ್ತಿದ ಅವರು ಲೋಕಸಭೆಯಲ್ಲಿ ನಡೆದ ಭದ್ರತಾ ವೈಫಲ್ಯದ ಪ್ರತಿಕ್ರಿಯೆ ನೀಡಿದರು. ಈ ಹಿಂದೆ ಉಗ್ರಗಾಮಿಗಳು ಸಂಸತ್ ಭವನದ ಮೇಲೆ ದಾಳಿ ನಡೆಸಿದ್ದರು. ಹುತಾತ್ಮರಿಗೆ ಸಂತಾಪ ಸೂಚಿಸುವ ದಿನವೇ ಈ ಘಟನೆ ನಡೆದಿದೆ. ಹೊಸ ಪಾರ್ಲಿಮೆಂಟ್ ಕಟ್ಟಡ ಕಟ್ಟಿದ್ದಾರೆ, ಆದರೂ ದೇಶದ ಭದ್ರತೆ ಕುಸಿದಿದೆ , ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ಆಗ್ರಹಿಸಿದರು.
ಲೋಕಸಭೆ ಭದ್ರತಾ ವೈಫಲ್ಯ ನಡೆದಿರುವ ಬೆನ್ನಲ್ಲೇ ಬೆಳಗಾವಿ ಸುವರ್ಣಸೌಧದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಸುವರ್ಣ ಸೌಧದ ಒಳಭಾಗದಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರುತ್ತಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗ ಲೋಕಸಭೆಯ ಕೊಠಡಿಗೆ ಹಾರಿದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.ಬಣ್ಣದ ಹೊಗೆಯೊಂದಿಗೆ ಪ್ರತಿಭಟಿಸಿದ್ದಕ್ಕಾಗಿ ದೆಹಲಿ ಪೊಲೀಸರು ಸಂಸತ್ತಿನ ಹೊರಗಿನ ಪುರುಷ ಮತ್ತು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ.