HomeKarnatakaBIG NEWS: ಅಕ್ರಮ ಕಂದಾಯ ನಿವೇಶನಗಳ ಮಾರಾಟ ನೋಂದಣಿ ಕಡ್ಡಾಯವಾಗಿ ಕೈ ಬಿಡಲು ಚಿಂತನೆ

BIG NEWS: ಅಕ್ರಮ ಕಂದಾಯ ನಿವೇಶನಗಳ ಮಾರಾಟ ನೋಂದಣಿ ಕಡ್ಡಾಯವಾಗಿ ಕೈ ಬಿಡಲು ಚಿಂತನೆ

ಬೆಳಗಾವಿ(ಸುವರ್ಣಸೌಧ): ಭೂ ಪರಿವರ್ತನೆ, ನಕ್ಷೆ ಮಂಜೂರಾತಿ ಪಡೆದುಕೊಳ್ಳದೆ ಅಕ್ರಮವಾಗಿ ನಿರ್ಮಿಸಿದ ಕಂದಾಯ ನಿವೇಶನಗಳ ಮಾರಾಟ ನೋಂದಣಿಯನ್ನು ಕಡ್ಡಾಯವಾಗಿ ಕೈ ಬಿಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಎಸ್.ಆರ್. ವಿಶ್ವನಾಥ್ ಅವರ ಪ್ರಸ್ತಾಪಕ್ಕೆ ಉತ್ತರ ನೀಡಿದ ಡಿಸಿಎಂ, ಈಗಾಗಲೇ ಕಂದಾಯ ನಿವೇಶನಗಳ ನಿರ್ಮಿಸಿ ಮಾರಾಟ ಮಾಡುವುದು ಕಾನೂನುಬಾಹಿರ ಎಂದು ಆದೇಶಿಸಲಾಗಿದೆ. ಹೀಗಿದ್ದರೂ ಕೆಲವೆಡೆ ಅಕ್ರಮವಾಗಿ ನಿವೇಶನ ನಿರ್ಮಾಣ ಮಾಡುತ್ತಿದ್ದಾರೆ ಎಂಬುದನ್ನು ಸದಸ್ಯರು ಸದನದ ಗಮನಕ್ಕೆ ತಂದಿದ್ದಾರೆ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಕಂದಾಯ ನಿವೇಶನಗಳ ನೋಂದಣಿಯನ್ನು ಕೈ ಬಿಡಲಾಗುವುದು. ಯೋಜನಾಬದ್ಧ ಬಡಾವಣೆಗಳ ನಿರ್ಮಾಣ, ನಿವೇಶನಗಳ ಮಾರಾಟಕ್ಕೆ ಮಾತ್ರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular