HomeKarnatakaಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮುಷ್ಕರ ಕೈಗೊಂಡಿದ್ದು, ಅವರ ಬೇಡಿಕೆ ಈಡೇರಿಸುವ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸದಸ್ಯ ಚಿದಾನಂದ ಗೌಡ 15 ದಿನಗಳಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಗೊಂಡಿದ್ದಾರೆ ಎಂದು ಸದನದಲ್ಲಿ ಗಮನ ಸೆಳೆದಾಗ ಸಚಿವರು ಪ್ರತಿಕ್ರಿಯೆ ನೀಡಿ, ಉಪನ್ಯಾಸಕರ ನಿಯೋಗ ಭೇಟಿ ಮಾಡಿ ಚರ್ಚಿಸಿದೆ. ಅತಿಥಿ ಉಪನ್ಯಾಸಕರ ಸಮಸ್ಯೆ ಮತ್ತು ಬೇಡಿಕೆಗಳು 20 ವರ್ಷಗಳಿಂದ ಬಗೆಹರಿದಿಲ್ಲ. ಎಲ್ಲವನ್ನು ಬಗೆಹರಿಸುತ್ತೇವೆ ಎಂದು ಹೇಳಲಾಗದು. ಆದರೆ, ಕೆಲವು ವಿಚಾರಗಳ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular