ಬೆಳಗಾವಿ: ರಾಜ್ಯದಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ 4000 ಸರ್ಕಾರಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು, ಎಲ್ಲಿ ಅಂಗನವಾಡಿ ಅಗತ್ಯ ಇದೆಯೋ ಅಲ್ಲಿ ನಿವೇಶನ ಲಭ್ಯವಾದ ಕೂಡಲೇ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಸೌಲಭ್ಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ಅಂಗನವಾಡಿ ನಿರ್ಮಿಸಲು ಬಳಕೆ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗಿದೆ. 4000 ಸರ್ಕಾರಿ ನಿವೇಶನ ಗುರುತಿಸಿದ್ದು, ಹಸ್ತಾಂತರ ಬಳಿಕ ಕಟ್ಟಡ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.