BIG NEWS: ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ ವಿಚಾರ; ಡಿಸಿಎಂ ಹೇಳಿದ್ದೇನು?

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿಯ ಹಲವು ಶಾಸಕರು ಭಾಗಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಮೊದಲಾದವರು ಭಾಗಿಯಾಗಿದ್ದರು. ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬೇರೆ ಬೇರೆ ಪಕ್ಷದ ಇನ್ನೂ ಹಲವು ನಾಯಕರು ಭಾಗಿಯಾಗಿದ್ದರು. ನಾನೇ ಅವರನ್ನೆಲ್ಲ ಊಟಕ್ಕೆ ಕರೆದಿದ್ದೆ ಎಂದು ತಿಳಿಸಿದ್ದಾರೆ.

ಅವರೆಲ್ಲರೂ ಊಟಕ್ಕೆ ಬಂದಿದ್ದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಸದನದಲ್ಲಿ ಡಿ.ಕೆ.ಶಿ ವಿರುದ್ಧದ ಸಿಬಿಐ ಕೇಸ್ ಪ್ರಸ್ತಾಪಕ್ಕೆ ಬಿಜೆಪಿ ಮುಂದಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಸ್ತಾಪ ಮಾಡಲಿ. ಯಾರು ಬೇಡ ಎಂದು ಹೇಳಲ್ಲ. ಕಾನೂನು ಇದೆ, ಸಂವಿಧಾನವಿದೆ, ಚರ್ಚೆ ಅಗಲಿ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read