ಬೆಂಗಳೂರು: ರಿಕವರಿ ಹಣ ದುರುಪಯೋಗ ಮಾಡಿದ ಆರೋಪದಲ್ಲಿ ಬಿಡದಿ ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಮೇರೆಗೆ ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೇ ಪ್ರಕರಣ ಸಂಬಂಧ ದೂರುದಾರ ಹರೀಶ್, ಇನ್ಸ್ ಪೆಕ್ಟರ್ ಶಂಕರ್ ನಡುವೆ ಮಧ್ಯವರ್ತಿಯಾಗಿದ್ದ ಲೋಕನಾಥ್ ಎಂಬಾತನನ್ನು ಬಂಧಿಸಲಾಗಿದೆ.
ಬಿಡದಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ಶಂಕರ್ ನಾಯಕ್ ವಿರುದ್ಧ ರಿಕವರಿ ಹಣ ದುರುಪಯೋಗ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಶಂಕರ್ ನಾಯಕ್, ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಂಕರ್ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ.