HomeKarnatakaBIG NEWS: ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣ; ವೈದ್ಯ ಸೇರಿ ಐವರ ವಿರುದ್ಧ...

BIG NEWS: ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣ; ವೈದ್ಯ ಸೇರಿ ಐವರ ವಿರುದ್ಧ FIR ದಾಖಲು

ಹೊಸಕೋಟೆ: ಹೊಸಪೇಟೆಯ ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಯುತ್ತಿರುವ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಆಸ್ಪತ್ರೆಯ ವೈದ್ಯ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯ ಶ್ರೀನಿವಾಸ್, ನರ್ಸ್ ಗಳಾದ ಅನಿತಾ, ನೇತ್ರಾ, ರೇವತಿ ಹಾಗೂ ರಾಧಿಕಾ ಎಂಬುವವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ವೈದ್ಯನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular