HomeKarnatakaBIGG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಪತಿ-ಪತ್ನಿ ಅಂತರ್ ಜಿಲ್ಲಾ...

BIGG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ, ಪೊಲೀಸ್ ಅಧಿಕಾರಿಗಳ ಕನಿಷ್ಠ ವರ್ಗಾವಣೆಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಅವಧಿ ಮೊದಲು ಎರಡು ವರ್ಷವಿತ್ತು. 7 ವರ್ಷದ ಹಿಂದೆ ಅದನ್ನು ಒಂದು ವರ್ಷಕ್ಕೆ ಮಾಡಲಾಗಿದೆ. . ಪೊಲೀಸ್ ಅಧಿಕಾರಿಗಳ ಕನಿಷ್ಠ ವರ್ಗಾವಣೆಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು ಕ್ರಿಮಿನಲ್ ಗುಂಡಾಗಳನ್ನೂ ಮಟ್ಟ ಹಾಕುವ ವೇಳೆಗೆ ಒಂದು ವರ್ಷ ಮುಗಿದು ಹೋಗುತ್ತದೆ. ಅದರಿಂದ ಕ್ರಿಮಿನಲ್ ಪ್ರಕರಣಗಳನ್ನು ಮಟ್ಟಹಾಕಲು ಆಗುತ್ತಿಲ್ಲ. ಆದ್ದರಿಂದ ಕನಿಷ್ಠ ವರ್ಗಾವಣೆ ಅವಧಿಯನ್ನು ಎರಡು ವರ್ಷಕ್ಕೆ ಹೆಚ್ಚಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular