ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬರ ಸಂಕಷ್ಟಕ್ಕೀಡಾಗಿರುವ ರೈತರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ನೊಂದಾಯಿಸಲ್ಪಟ್ಟ 500 ಮೀಟರ್ ವ್ಯಾಪ್ತಿಯೊಳಗಡೆ ಇರುವ ಪಂಪ್ ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗಿದೆ. 500 ಮೀಟರ್ ಇಂದ ಆಚೆ ಇರುವ ಪಂಪ್ ಸೆಟ್‍ಗಳಿಗೆ ಕೇಂದ್ರ ಸರ್ಕಾರದ ಶೇ 30 ಹಾಗೂ ರಾಜ್ಯ ಸರ್ಕಾರ ಶೇ 50 ರಷ್ಟು ಸಬ್ಸಿಡಿ ನೀಡಿ, ಸೋಲಾರ್ ಪಂಪ್ ಸೆಟ್ ಅಳವಡಿಸಲು ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ವಿವಿಧ ಎಸ್ಕಾಂಗಳಲ್ಲಿ ರೈತರು ಅಳವಡಿಕೆ ಮಾಡಿರುವ 4 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 2015ರಿಂದ ಈಚಿನ ಪಂಪ್ಸೆಟ್ ಗಳಿಗೆ ಅಕ್ರಮವಾಗಿ ಅಳವಡಿಸಿರುವ ಕೃಷಿ ಪಂಸೆಟ್ ಗಳ ವಿದ್ಯುತ್ ಸಂಪರ್ಕ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ.