HomeKarnatakaರಾಜ್ಯಕ್ಕೆ ಗುಡ್ ನ್ಯೂಸ್: ಶಿವಮೊಗ್ಗ, ಬಳ್ಳಾರಿ, ತುಮಕೂರು, ಉಡುಪಿ ಸೇರಿ 8 ESI ಆಸ್ಪತ್ರೆ ಆರಂಭಿಸಲು...

ರಾಜ್ಯಕ್ಕೆ ಗುಡ್ ನ್ಯೂಸ್: ಶಿವಮೊಗ್ಗ, ಬಳ್ಳಾರಿ, ತುಮಕೂರು, ಉಡುಪಿ ಸೇರಿ 8 ESI ಆಸ್ಪತ್ರೆ ಆರಂಭಿಸಲು ಒಪ್ಪಿಗೆ

ನವದೆಹಲಿ: ಶಿವಮೊಗ್ಗ, ಬಳ್ಳಾರಿ, ತುಮಕೂರು, ಉಡುಪಿ ಸೇರಿದಂತೆ ಕರ್ನಾಟಕದ 8 ಕಡೆಗಳಲ್ಲಿ ಇಎಸ್ಐ ಆಸ್ಪತ್ರೆಗಳನ್ನು ಆರಂಭಿಸಲು ಉದ್ಯೋಗಿಗಳ ರಾಜ್ಯ ವಿಮಾನ ನಿಗಮ ತಾತ್ವಿಕ ಒಪ್ಪಿಗೆ ನೀಡಿದೆ.

ರಾಜ್ಯಸಭೆಯಲ್ಲಿ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವ ರಾಮೇಶ್ವರ ತೇಲಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕದ 8 ಕಡೆಗಳಲ್ಲಿ ಇಎಸ್ಐ ಆಸ್ಪತ್ರೆ ಆರಂಭಿಸಲು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಬೆಂಗಳೂರಿನ ಬೊಮ್ಮಸಂದ್ರದಲ್ಲಿ 200 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಆರಂಭಿಸಲಾಗುವುದು. ದೊಡ್ಡಬಳ್ಳಾಪುರ, ನರಸಾಪುರ, ಶಿವಮೊಗ್ಗ, ಹಾರೋಹಳ್ಳಿ, ತುಮಕೂರು, ಬಳ್ಳಾರಿ, ಉಡುಪಿಯಲ್ಲಿ ತಲಾ 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣಕ್ಕೆ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular