‘ಕ್ರಾಂತಿ’ ಚಿತ್ರದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಮತ್ತೊಮ್ಮೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಅಭಿನಯಿಸಿದ್ದು, ಕುಮಾರ್ ಗೋವಿಂದ್, ಜಗಪತಿ ಬಾಬು, ಶೃತಿ, ಮಾಸ್ಟರ್ ರೋಹಿತ್, ಬಿರಾದರ್, ಅವಿನಾಶ್ ಬಣ್ಣ ಹಚ್ಚಿದ್ದಾರೆ.
ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನವಿದೆ. ಡಿಸೆಂಬರ್ 29 ರಂದು ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.