alex Certify BIG NEWS: ಮೆಟ್ರೋ ಗ್ರೀನ್ ಲೈನ್ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೆಟ್ರೋ ಗ್ರೀನ್ ಲೈನ್ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

ಬೆಂಗಳೂರು: ನಮ್ಮ ಮೆಟ್ರೋ ಗ್ರೀನ್ ಲೈನ್ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರ ಏಕಾಏಕಿ ಸ್ಥಗಿತಗೊಂಡಿದ್ದು ಮೆಟ್ರೋ ನಿಲ್ದಾಣದಲ್ಲಿಯೇ ಪ್ರಯಾಣಿಕರು ಪದದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪೀಣ್ಯ ಮೆಟ್ರೋ ನಿಲ್ದಾಣದಲ್ಲಿ ಬೆಳಿಗ್ಗೆ 10:18ಕ್ಕೆ ಹಸಿರು ಮಾರ್ಗದ ಹಳಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹಸಿರುವ ಮಾರ್ಗದ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಮೆಟ್ರೋ ಸ್ಟೇಷನ್ ಗೆ ಬಂದ ಪ್ರಯಾಣಿಕರು ಮೆಟ್ರೋ ರೈಲು ಸಂಚಾರವಿಲ್ಲದೇ ನಿಲ್ದಾಣದಲ್ಲಿಯೇ ಕಾದು ಕುಳಿತುಕೊಳ್ಳಬೇಕಾದ ಸ್ಥಿತಿ ಎದುರಾಗಿದೆ.

ಹಸಿರು ಮಾರ್ಗವಾದ ಯಶವಂತಪುರ-ನಾಗಸಂದ್ರ ಮಾರ್ಗದಲ್ಲಿ ಮೆಟ್ರೋ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ತಾಂತ್ರಿಕ ಸಮಸ್ಯೆ ಸರಿಪಡಿಸಿದ ಬಳಿಕ ಮೆಟ್ರೋ ಸಂಚಾರ ನಡೆಸಲಿದೆ. ಬಿಎಂಆರ್ ಸಿ ಎಲ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...