ಬೆಳಗಾವಿ(ಸುವರ್ಣಸೌಧ): ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.
ಅಧಿವೇಶನದ ಮುಕ್ತಾಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣ ಸೌಧದಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ಸುವರ್ಣ ಸೌಧ ಆವರಣದಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರ ವಾಸ್ತವ್ಯಕ್ಕೆ ಮಾತ್ರವಲ್ಲದೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಶಾಸಕರ ಭವನ ನಿರ್ಮಾಣ ಅನಿವಾರ್ಯ. ಸರ್ಕಾರದಿಂದಲೇ ಶಾಸಕರ ಭವನ ನಿರ್ಮಾಣ ಮಾಡಿ ನಿರ್ವಹಿಸಲು ವರ್ಷಪೂರ್ತಿ ನೂರಾರು ಸಿಬ್ಬಂದಿ ನೇಮಕ ಮಾಡಿ ದುಂದು ವೆಚ್ಚ ಮಾಡಬೇಕಾಗುತ್ತದೆ. ಹೀಗಾಗಿ ಪಿಪಿಪಿ ಮಾದರಿಯಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.