HomeIndiaಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್

ನವದೆಹಲಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು 4 ವಾರಗಳಲ್ಲಿ ಘಟನೆಯ ಬಗ್ಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ಮಾನವ ಹಕ್ಕು ಆಯೋಗ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಫ್ಐಆರ್ ದಾಖಲಾತಿಯ ಸ್ಥಿತಿ, ತನಿಖೆಯ ಪ್ರಗತಿ, ಪ್ರಕರಣದಲ್ಲಿ ಬಂಧನ, ಸಂತ್ರಸ್ತರಿಗೆ ಪರಿಹಾರ ನೀಡಿದ್ದಲ್ಲಿ ಅದರ ಬಗ್ಗೆ ವಿವರ, ರಾಜ್ಯದಲ್ಲಿ ಈ ರೀತಿಯ ಘಟನೆಗಳನ್ನು ತಡೆಯಲು ಕೈಗೊಂಡ ಕ್ರಮಗಳು ಅಥವಾ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವರದಿ ಒಳಗೊಂಡಿರಬೇಕು ಎಂದು ತಿಳಿಸಲಾಗಿದೆ.

ಆಯೋಗದ ಡಿಐಜಿ ಶೀಘ್ರವಾಗಿ ಸತ್ಯಶೋಧನಾ ತಂಡ ರಚಿಸಿ ಘಟನೆ ನಡೆದ ಸ್ಥಳದಲ್ಲಿ ವಿಚಾರಣೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular