HomeKarnatakaನೇಕಾರರಿಗೆ ಸಿಹಿ ಸುದ್ದಿ: ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ

ನೇಕಾರರಿಗೆ ಸಿಹಿ ಸುದ್ದಿ: ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ

ಬೆಳಗಾವಿ(ಸುವರ್ಣಸೌಧ): ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಬಿ. ಸುರೇಶ ಬಾಬು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಜರಾತ್, ತಮಿಳುನಾಡು ರಾಜ್ಯಗಳಿಗೆ ಹೋಲಿಸಿದಲ್ಲಿ ನಮ್ಮಲ್ಲಿ ಕೈಮಗ್ಗ ನೇಕಾರರಿಗೆ ಹೆಚ್ಚಿನ ಸೌಲಭ್ಯವಿಲ್ಲ. ಆ ರಾಜ್ಯಗಳಲ್ಲಿ ಕೈಮಗ್ಗ ನೇಕಾರರ ಉತ್ಪನ್ನಗಳಿಗೆ ರಾಜ್ಯದ ಕೈಮಗ್ಗ ನೇಕಾರರು ಪೈಪೋಟಿ ನೀಡದ ಸ್ಥಿತಿಯಲ್ಲಿ ಇದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ನೂತನ ಜವಳಿ ನೀತಿ ರಚಿಸಲಾಗುತ್ತಿದೆ. ಇದರಲ್ಲಿ ಕೈಮಗ್ಗ ಉತ್ತೇಜನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಕಾರರ ಪ್ಯಾಕೇಜ್ ಯೋಜನೆಯಡಿ 10 ಹೆಚ್.ಪಿ. ವರೆಗೆ ವಿದ್ಯುತ್ ಸೇರಿ ಹಲವು ಸೌಲಭ್ಯ ಕಲ್ಪಿಸಲಾಗಿದೆ. ಈ ರೀತಿ ವಿದ್ಯುತ್ ಮಗ್ಗಗಳಿಗೆ 10 ಹೆಚ್.ಪಿ. ವರೆಗೆ ಉಚಿತ ವಿದ್ಯುತ್ ನೀಡಿದ ಮೊದಲ ರಾಜ್ಯ ನಮ್ಮದಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular