alex Certify ಗಮನಿಸಿ : ಇವರಿಗೆ ಮಾತ್ರ ಸಿಗಲಿದೆ ʻಯುವನಿಧಿʼ ಯೋಜನೆಯ ನಿರುದ್ಯೋಗ ಭತ್ಯೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಇವರಿಗೆ ಮಾತ್ರ ಸಿಗಲಿದೆ ʻಯುವನಿಧಿʼ ಯೋಜನೆಯ ನಿರುದ್ಯೋಗ ಭತ್ಯೆ!

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳಲ್ಲಿ ಈಗಾಗಲೇ 4 ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಜಾರಿಯಾಗಿವೆ. ಐದನೇ ‘ಗ್ಯಾರಂಟಿʼ ಯೋಜನೆ ‘ಯುವ ನಿಧಿʼಗೆ ಡಿಸೆಂಬರ್ 26ರಿಂದ ನೋಂದಣಿ ಆರಂಭವಾಗಲಿದೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾಗಿ ಆರು ತಿಂಗಳು ಪೂರೈಸಿರುವ ಕರ್ನಾಟಕದ ಯುವಕ-ಯುವತಿಯರು ಸೇವಾ ಸಿಂಧು ಪೋರ್ಟಲ್ ಮೂಲಕ `ಯುವ ನಿಧಿʼಗೆ ನೋಂದಣಿ ಮಾಡಿಕೊಳ್ಳಬಹುದು. 2024ರ ಜನವರಿ 1ರಿಂದ ಯೋಜನೆ ಆರಂಭವಾಗಲಿದೆ.

ಯಾರೆಲ್ಲಾ ಅರ್ಹರರು?

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು

ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ

ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ

ಆಧಾರ್‌ ಕಾರ್ಡ್‌

ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ)

ಬ್ಯಾಂಕ್ ಖಾತೆ ವಿವರ

ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...