ನವದೆಹಲಿ : ನಿರುದ್ಯೋಗ, ಹಣದುಬ್ಬರದಿಂದಲೇ ಸಂಸತ್ ಮೇಲೆ ದಾಳಿ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದರು.
ಭದ್ರತಾ ಲೋಪದ ಬಗ್ಗೆ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ನೀತಿಯಿಂದ ದೇಶದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಆರೋಪಿಸಿದರು.
ಉದ್ಯೋಗಗಳು ಎಲ್ಲಿವೆ? ಯುವಕರು ಹತಾಶರಾಗಿದ್ದಾರೆ – ನಾವು ಈ ವಿಷಯದ ಬಗ್ಗೆ ಗಮನ ಹರಿಸಬೇಕು, ಯುವಕರಿಗೆ ಉದ್ಯೋಗ ನೀಡಬೇಕು. ಭದ್ರತಾ ಲೋಪವಾಗಿದೆ, ಆದರೆ ಅದರ ಹಿಂದಿನ ಕಾರಣ ದೇಶದ ಅತಿದೊಡ್ಡ ಸಮಸ್ಯೆ – ನಿರುದ್ಯೋಗ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದರು.
ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು, ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು. ಇದರಿಂದ ಬೆದರಿದ ಸಂಸದರು ಸಂಸತ್ ಭವನದಿಂದ ಹೊರಗೆ ಓಡಿ ಹೋಗಿದ್ದರು. ಅಲ್ಲದೇ ಸಂಸತ್ ಭವನದ ಹೊರಗಡೆ ಇಬ್ಬರು ಹೊಗೆ ಸೂಸುವ ಡಬ್ಬಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು.