HomeKarnatakaBIG NEWS: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪೊಲೀಸರಿಂದ ಮತ್ತೆ ಪ್ರಸ್ತಾವನೆ

BIG NEWS: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪೊಲೀಸರಿಂದ ಮತ್ತೆ ಪ್ರಸ್ತಾವನೆ

ಕಲಬುರ್ಗಿ: ಬಿಜೆಪಿ ಮುಖಂಡ, ಚಿತ್ತಾಪುರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಗಡಿಪಾರಿಗೆ ಮತ್ತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕಲಬುರ್ಗಿ ವ್ಯಾಪ್ತಿಯಿಂದ ಗಡಿಪಾರು ಮಾಡುವಂತೆ ಕಲಬುರ್ಗಿ ಉಪನಗರ ಠಾಣೆ ಪೊಲೀಸರು ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹ, ಶಾಂತಿಗೆ ಭಂಗ ತರುವುದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್ ಗಡಿಪಾರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಇನ್ನು ಗಡಿಪಾರು ಆದೇಶಕ್ಕೂ ಮುನ್ನ ಡಿ.19ರಂದು ಡಿಸಿಪಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ವೈಯಕ್ತಿಕ ಅಥವಾ ವಕೀಲರ ಮೂಲಕ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular