ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಿಪಿಎಂ, ಬಹುಜನ ಸಮಾಜ ಪಕ್ಷ, ನ್ಯಾಷನಲ್ ಪೀಪಲ್ಸ್ ಪಾರ್ಟಿ ರಾಷ್ಟ್ರೀಯ ಪಕ್ಷಗಳೆಂದು ಚುನಾವಣಾ ಆಯೋಗ ಪ್ರಕಟಿಸಿದೆ. ಈ ಆರು ಪಕ್ಷಗಳು ಮಾತ್ರ ರಾಷ್ಟ್ರೀಯ ಸ್ಥಾನಮಾನ ಹೊಂದಿವೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.
ಜೆಡಿಎಸ್ ಪಕ್ಷ ರಾಜ್ಯ ಪಕ್ಷದ ಸ್ಥಾನಮಾನವನ್ನು ಹೊಂದಿದೆ. ಕಲ್ಯಾಣ ರಾಜ್ಯ ಪ್ರಗತಿಪಕ್ಷ, ಕರ್ನಾಟಕ ರಾಷ್ಟ್ರ ಸಮಿತಿ ಸೇರಿದಂತೆ 110 ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳು ರಾಜ್ಯದಲ್ಲಿವೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ನಿಯಮಗಳ ಅಡಿಯಲ್ಲಿ ಆಯೋಗ ಅಧಿಸೂಚನೆ ಹೊರಡಿಸಿದ್ದು, ಆರು ಪಕ್ಷಗಳು ರಾಷ್ಟ್ರೀಯ ಸ್ಥಾನಮಾನ ಹೊಂದಿವೆ ಎಂದು ಹೇಳಿದೆ.