ಕೋಲಾರ: ಕೋಲಾರದ ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿದ ಪ್ರಕರಣ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಶಿಕ್ಷಕರು ಹೊಡೆದು ಚಿತ್ರ ಹಿಂಸೆ ಕೊಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂರೆ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಸೇರಿದಂತೆ ಎಲ್ಲರನ್ನೂ ಅಮಾನತುಗೊಳಿಸುವಂತೆ ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೂಚಿಸಿದ್ದಾರೆ.
ಯಲುವಹಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳಗೆ ನೀಡುತ್ತಿದ್ದ ಚಿತ್ರಹಿಂಸೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸಚಿವರು, ಯಲುವಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ವಾರ್ಡನ್ ಗಳು, ಶಾಲಾ ಸಿಬಂದಿಗಳು ಸೇರಿದಂತೆ ಎಲ್ಲರನ್ನು ಅಮಾನತುಗೊಳಿಸುವಂತೆ ಆದೇಶ ನೀಡಲಾಗಿದೆ.
ಅಲ್ಲದೇ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.