HomeKarnataka2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ.

ಯಾವ ತಿಂಗಳಲ್ಲಿ ಸಮ್ಮೇಳನ ನಡೆಸಿದರೆ ಸೂಕ್ತ ಎಂಬ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಶೀಘ್ರದಲ್ಲಿ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024ರ ಜನವರಿಯಲ್ಲಿ ಸಮ್ಮೇಳನ ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ಸಮ್ಮೇಳನದ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ಬರ ಪರಿಸ್ಥಿತಿ ಎದುರಾಗಿರುವುದರಿಂದ ಇಂತಹ ಸಂದರ್ಭದಲ್ಲಿ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಿ ಮುಂದೂಡಲಾಗಿದೆ. ಮಂಡ್ಯ ಸಾಹಿತ್ಯ ಸಮ್ಮೇಳನವನ್ನು ರದ್ದು ಮಾಡಿಲ್ಲ, ಮುಂದೂಡಲಾಗಿದ್ದು, 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular