HomeKarnatakaಕಟ್ಟಡ ಕಾರ್ಮಿಕರಿಗೆ ಮತ್ತೊಂದು ಸಿಹಿ ಸುದ್ದಿ: ವಸತಿ ಸೌಲಭ್ಯ ಕಲ್ಪಿಸಲು ಗುಂಪು ವಸತಿ ಯೋಜನೆ ಜಾರಿ

ಕಟ್ಟಡ ಕಾರ್ಮಿಕರಿಗೆ ಮತ್ತೊಂದು ಸಿಹಿ ಸುದ್ದಿ: ವಸತಿ ಸೌಲಭ್ಯ ಕಲ್ಪಿಸಲು ಗುಂಪು ವಸತಿ ಯೋಜನೆ ಜಾರಿ

ಬೆಂಗಳೂರು: ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಸತಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಕಾರ್ಮಿಕರಿಗೆ ಆಸ್ಪತ್ರೆ ಸಹಾಯಧನ, ಉಚಿತ ಟೂಲ್ ಕಿಟ್, ಮಕ್ಕಳ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಸೌಲಭ್ಯ ಜಾರಿಯಾಗಿದೆ. ವಸತಿ ಸೌಲಭ್ಯ ಕುರಿತಾಗಿ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಇದರ ಭಾಗವಾಗಿ ಸಚಿವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಸತಿ ಇಲಾಖೆ, ಕಾರ್ಮಿಕ ಇಲಾಖೆ, ಪೌರಾಡಳಿತ ಇಲಾಖೆ ಜೊತೆಗೂಡಿ ಯೋಜನೆ ಜಾರಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಶೀಘ್ರವೇ ಗುಂಪು ವಸತಿ ಯೋಜನೆ ಜಾರಿಗೆ ಬರಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular