![](https://kannadadunia.com/wp-content/uploads/2022/03/shamanur-shivashankarappa.jpeg)
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಡಿಸೆಂಬರ್ 23, 24ರಂದು ದಾವಣಗೆರೆಯಲ್ಲಿ 24ನೇ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಬೆಂಗಳೂರು ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಮೃತ್ಯುಂಜಯ ಸ್ವಾಮಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಅಧಿವೇಶನ ನಡೆಯಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ನಾಡಿನ ಸ್ವಾಮೀಜಿಗಳು, ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರು, ವಿದ್ವಾಂಸರು, ಕಲಾವಿದರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಧಾರ್ಮಿಕ, ಶೈಕ್ಷಣಿಕ, ಕೈಗಾರಿಕೆ, ಕೃಷಿ, ಯುವ, ಮಹಿಳಾ ಗೋಷ್ಠಿಗಳು ನಡೆಯಲಿವೆ. ಸಮಾಜದ ಭವಿಷ್ಯದ ಅಭಿವೃದ್ಧಿಗೆ ಸಮಾಜದ ಒಳಿತಿಗೆ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಡಾ. ಶಾಮನೂರು ಶಿವಶಂಕರಪ್ಪ ಮಾತನಾಡಿ, ಇದು ಸಮಾಜದ ಕಾರ್ಯಕ್ರಮವಾಗಿದೆ. ಸಮಾಜದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಕರೆಯಬೇಕೆಂದೆನೂ ಇಲ್ಲ. ಈ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದ್ದಾರೆ.