ಬೆಂಗಳೂರು: ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.
ಕೇಂದ್ರ ಸರ್ಕಾರ ರಾಜ್ಯಗಳಿಗೆ ಮಾರ್ಗಸೂಚಿ ನೀಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಡಿ ಹೆಚ್ ಒ ಗಳೊಂದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಹರಡದಂತೆ ರಾಜ್ಯದಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.
ಕೋವಿಡ್ ಆತಂಕ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ನ್ಯೂ ಇಯರ್ ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪ್ರತ್ಯೇಕ ಮಾರ್ಗಸೂಚಿ ಕುರಿತು ಚರ್ಚೆ ನಡೆಯಲಿದೆ. ಇನ್ನು ರೋಗಿಗಳಿಗೆ ಆರ್ ಟಿ ಪಿಸಿ ಆರ್ ಟೆಸ್ಟ್ ಕಡ್ಡಾಯ ಮಾಡುವ ಸಾಧ್ಯತೆ ಇದೆ. JN.1 ಉಪತಳಿ ಪತ್ತೆಗೆ ಆಂಟಿಜನ್ ಟೆಸ್ಟ್ ಗೆ ಸೂಚನೆ ನೀಡುವ ಸಾಧ್ಯತೆ ಇದೆ. ಪಿ ಹೆಚ್ ಸಿ ಸೆಂಟರ್, ಸರ್ಕಾರಿ ಆಸ್ಪತ್ರೆಗಳಲ್ಲಿ ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.