ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪೋಷಕರು ಇದೇ ಡಿಸೆಂಬರ್ 31ರ ಒಳಗಾಗಿ ಹತ್ತಿರದ KREIS ವಸತಿ ಶಾಲೆಗಳಿಗೆ ತೆರಳಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪಟ್ಟಿ:
ಮೊರಾರ್ಜಿ ದೇಸಾಯಿ ವಸತಿ ಶಾಲೆ
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
ಏಕಲವ್ಯ ಮಾದರಿ ವಸತಿ ಶಾಲೆ
ಶ್ರೀ ನಾರಾಯಣ ಗುರು ವಸತಿ ಶಾಲೆ
ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ
ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ
ಒಟ್ಟು 807 ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದೇ ಡಿಸೆಂಬರ್ 31ರ ಒಳಗಾಗಿ ಹತ್ತಿರದ KREIS ವಸತಿ ಶಾಲೆಗಳಿಗೆ ತೆರಳಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24X7 ಸಹಾಯವಾಣಿ 9482300400