ನವದೆಹಲಿ : ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದರು.
ಬರ ಪರಿಸ್ಥಿತಿ, ಬರ ಪರಿಹಾರಕ್ಕೆ ನೆರವು , ನೀರಾವರಿ ಯೋಜನೆಗಳ ಅನುಷ್ಠಾನ, ಜಿಎಸ್ಟಿ ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಬಳಿ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಇತ್ತೀಚೆಗೆ ಟ್ವಿಟ್ಟರ್ ನಲ್ಲಿ’ ಸಿದ್ದರಾಮಯ್ಯ ಅವರು ರಾಜಕೀಯವನ್ನು ಬದಿಗಿಟ್ಟು ರಾಜ್ಯ ಮತ್ತು 6.5 ಕೋಟಿ ಕನ್ನಡಿಗರ ಹಿತಾಸಕ್ತಿಗಳನ್ನು ಕಾಪಾಡಲು ರಾಜನೀತಿಯನ್ನು ಪ್ರದರ್ಶಿಸಬೇಕೆಂದು’ ಸಲಹೆ ನೀಡಿದ್ದರು.
ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿರುವಾಗ ತಮ್ಮ ಕ್ಷುಲ್ಲಕ ರಾಜಕೀಯ ಬದಿಗಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ, ಕನ್ನಡ ನಾಡಿನ ಆರೂವರೆ ಕೋಟಿ ಜನತೆಯ ಹಿತರಕ್ಷಣೆಯ ದೃಷ್ಟಿಯಿಂದ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಮಾನ್ಯ ಸಿದ್ದರಾಮಯ್ಯನವರು ತಮ್ಮ ಮುತ್ಸದ್ಧಿತನ ಪ್ರದರ್ಶಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸಲಹೆ ನೀಡಿದ್ದರು.