ಬೆಂಗಳೂರು : ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪ್ರಸ್ತುತ, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ ಪೂರ್ವಭಾವಿ ಕ್ರಮಗಳ ಪಾಲನೆಯು ಅವಶ್ಯಕವಾಗಿದೆ ಎಂದು ತಿಳಿಸಿದೆ.
[0:56 pm, 19/12/2023] SR: ಪ್ರಸ್ತುತ, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ ಪೂರ್ವಭಾವಿ ಕ್ರಮಗಳ ಪಾಲನೆಯು ಅವಶ್ಯಕವಾಗಿದೆ.
ಈ ಕೆಳಗಿನ ಶಿಫಾರಸ್ಸುಗಳನ್ನು ಸೂಕ್ತ ಹಂತಗಳಲ್ಲಿ ಅನುಸರಿಸುವಂತೆ ಸೂಚಿಸಿದೆ.
ಭಾರತ ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಅನಗತ್ಯ ಗಾಬರಿಯಿಂದ ಈಗಲೇ ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಸರ್ವೇಕ್ಷಣೆಯನ್ನು ಹೆಚ್ಚಿಸುವುದು ಅಥವಾ ನಿರ್ಬಂಧಗಳನ್ನು ಹೇರುವ ಅವಶ್ಯಕತೆಯಿರುವುದಿಲ್ಲ.
ಆದಾಗೂ ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ನಡೆಸುವುದು ಹಾಗೂ ವರದಿ ಸಲ್ಲಿಸುವುದು ಅಗತ್ಯವಾಗಿದೆ.
ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ, ಎಲ್ಲಾ SARI ಪ್ರಕರಣಗಳು ಹಾಗೂ 20 ILI ಪ್ರಕರಣಗಳ ಪೈಕಿ 1 ILI ಪ್ರಕರಣವನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಬೇಕು.
ಈ ಕೆಳಕಂಡ ಪ್ರಕರಣಗಳ ಮಾದರಿಗಳನ್ನು Whole genome sequencing (WGS) ಪರೀಕ್ಷೆಗೆ ರವಾನಿಸಬೇಕು.
ಅಂತರರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್ -19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು (irrespective of Ct value are to be sent for WGS).
ಗುಂಪು – ಗುಂಪಾಗಿ ವರದಿಯಾಗುವ ಪ್ರಕರಣಗಳು / ಹೆಚ್ಚು ಪ್ರಕರಣಗಳು ಮತ್ತು ಹಾಗೂ ಅಥವಾ ಮರಣಗಳು ವರದಿಯಾಗುವ ಫೋಕಲ್ ಔಟ್ ಬ್ರೇಕ್ ಗಳ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು WGS ಪರೀಕ್ಷೆಗೆ ಕಳುಹಿಸಬೇಕು.
ತೀವ್ರ ಸ್ವರೂಪದ ರೋಗಲಕ್ಷಣಗಳನ್ನು ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SARI ಪ್ರಕರಣಗಳು ಹಾಗೂ ಸುದೀರ್ಘ ಅವಧಿಯವರೆಗೆ ಆಸ್ಪತ್ರೆಯಲ್ಲಿ ದಾಖಲಾದ ಪ್ರಕರಣಗಳು.
ಕೋವಿಡ್ – 19 ನ ಮರು ಸೋಂಕಿಗೆ ಒಳಗಾದವರು.
ಕೋವಿಡ್ 19 ಲಸಿಕೆಯ ಎರಡು ಡೋಸ್ ವ್ಯಾಕ್ಸಿನ್ ಪಡೆದ ನಂತರವೂ ಕೋವಿಡ್ 19ನ ಸೋಂಕು ದೃಢಪಟ್ಟವರು.
ಕೋವಿಡ್ 19 ಮರಣ ಪ್ರಕರಣಗಳು
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗುವ 25 ಕ್ಕಿಂತ ಕಡಿಮೆ Ct value ಇರುವ ಮಾದರಿಗಳನ್ನು (ಅಂತರ ರಾಷ್ಟ್ರೀಯ ಪ್ರಯಾಣ ಹಿನ್ನೆಲೆಯುಳ್ಳವರನ್ನು ಹೊರತು ಪಡಿಸಿ) BMC&RJ ಬೆಂಗಳೂರು, ಇಲ್ಲಿಗೆ WGS ಪರೀಕ್ಷೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಅಗತ್ಯ ಸಮನ್ವಯವನ್ನು ವಹಿಸಬೇಕು.
ಮುಂದುವರೆದು, ಉಲ್ಲೇಖ (1) ರ ಅರ- ಸರ್ಕಾರಿ ಪತ್ರವನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಲಾಗಿದೆ. ಅದರಂತೆ, ಮುಂಬರುವ ದಿನಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾದ ಪಕ್ಷದಲ್ಲಿ, ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಕಾರ್ಯಾಚರಣೆ ಸಿದ್ಧತೆಯನ್ನು ( Operational readiness) ಖಚಿತ ಪಡಿಸಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅರೆ-ಸರ್ಕಾರಿ ಪತ್ರದಲ್ಲಿ ತಿಳಿಸಿರುವ ಮಾನದಂಡಗಳನ್ನು ಗಮನದಲ್ಲಿರಿಸಿಕೊಂಡು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಡಿಸೆಂಬರ್ 3-4ನೇ ವಾರದೊಳಗೆ ಅಣಕು ಪ್ರದರ್ಶನವನ್ನು (drill) ಪೂರ್ಣಗೊಳಿಸಲು ಸೂಚಿಸಿದೆ.
ಒಟ್ಟಾರೆ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಮೇಲಿನ ಅಂಶಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳುವಂತೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೆ ಸೂಚಿಸಿದೆ.