ಬೆಂಗಳೂರು: ಬೀದಿಬದಿ ವ್ಯಾಪಾರಿಗಳು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದು, ತೆರವು ಕಾರ್ಯಾಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಬಳಿ ಜಮಾವಣೆಗೊಂಡಿರುವ ನೂರಾರು ಬೀದಿಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಯೋಜನೆ ಹಿನ್ನೆಲೆಯಲ್ಲಿ ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಪರವಾನಗಿ ನವೀಕರಣ ಮಾಡಿಕೊಡುವಂತೆ ಹಾಗೂ ಹೊಸ ಲೈಸನ್ಸ್ ನೀಡುವಂತೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಲೈಸನ್ಸ್ ನವೀಕರಣಕ್ಕೆ ಪಾಲಿಕೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಅಧಿಕಾರಿಗಳ ಧೋರಣೆಗೆ ತಾಳ್ಮೆ ಕಡೆದುಕೊಂಡ ಪ್ರತಿಭಟನಾಕಾರರು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲಿಸರು ಹರಸಾಹಸ ಪಟ್ಟಿದ್ದಾರೆ.