HomeKarnatakaಸಿಎಂ ಸಿದ್ದರಾಮಯ್ಯ ವಾಯ್ಸ್ ರಿಮೇಕ್ ಮಾಡಿದ ಯುವಕ: ಪ್ರಕರಣ ದಾಖಲು

ಸಿಎಂ ಸಿದ್ದರಾಮಯ್ಯ ವಾಯ್ಸ್ ರಿಮೇಕ್ ಮಾಡಿದ ಯುವಕ: ಪ್ರಕರಣ ದಾಖಲು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಯ್ಸ್ ರಿಮೇಕ್ ಮಾಡಿದ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ವಿರುದ್ಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದು, ಶರತ್ ಗೌಡ ಎಂಬುವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದನ್ನು ಸಿದ್ದರಾಮಯ್ಯ ಹೇಳಿದಂತೆ ವಾಯ್ಸ್ ರಿಮೇಕ್ ಮಾಡಿದ ಆಡಿಯೋ ಜಾಲತಾಣದಲ್ಲಿ ಹರಿದಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣವನ್ನು ಎಲ್ಲಿಂದ ತರಲಿ? ಚುನಾವಣೆಗೋಸ್ಕರ ಹೇಳಿರುತ್ತೇವೆ. ಹೇಳಿದಂತೆ ನಡೆದುಕೊಳ್ಳಲು ಆಗುತ್ತಾ ಎಂದು ಆಡಿಯೋದಲ್ಲಿದೆ. ಈ ಹಿಂದೆ 2009ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಹೇಳಿದ್ದ ಮಾತನ್ನು ಸಿದ್ದರಾಮಯ್ಯ ಹೇಳಿರುವಂತೆ ವಾಯ್ಸ್ ರಿಮೇಕ್ ಮಾಡಲಾಗಿದೆ ಎಂದು ಆರೋಪಿಸಿ ಶರತ್ ಗೌಡ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಅಂತೆಯೇ ಎನ್ಆರ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular