ಬೆಂಗಳೂರು : ಕಿಲ್ಲರ್ ಕೊರೊನಾಗೆ ( Corona Viruse ) ರಾಜ್ಯದಲ್ಲಿ ಓರ್ವ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಜೆ ಎನ್ 1 ಉಪತಳಿ ಆತಂಕದ ನಡುವೆಯೇ ಕೊರೊನಾ ಸೋಂಕಿಗೆ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಚಾಮರಾಜಪೇಟೆ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತಪಟ್ಟ ವೃದ್ದ ಬೆಂಗಳೂರಿನ ಚಾಮರಾಜಪೇಟೆ ನಿವಾಸಿಯಾಗಿದ್ದು, ಡಿಸೆಂಬರ್ 15 ರಂದು ಈತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮೃತ ವೃದ್ದನಿಗೆ ಜೆಎನ್ 1 ಇರುವ ಬಗ್ಗೆ ಧೃಡವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.