alex Certify BREAKING : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ : ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಯುವಕನ ತಂದೆಗೆ ಥಳಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ : ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಯುವಕನ ತಂದೆಗೆ ಥಳಿತ

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಪ್ರೇಮಿಗಳು ಓಡಿ ಹೋಗಿದ್ದಾರೆ ಎಂದು ಯುವಕನ ತಂದೆಗೆ ಯುವತಿಯ ಪೋಷಕರು ಥಳಿಸಿದ ಘಟನೆ ನಡೆದಿದೆ.

ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಬೆಳಗಾವಿ ನಗರದಲ್ಲಿ ಮತ್ತೊಂದು ಘಟನೆ ನಡೆದಿದೆ.

ಪ್ರೇಮಿಗಳು ಪರಾರಿಯಾಗಿದ್ದಾರೆ ಎಂದು ಸಿಟ್ಟಿಗೆದ್ದ ಯುವತಿ ಕಡೆಯವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಂದೆಯನ್ನು ಎಳೆದುಕೊಂಡು ಬಂದು ನೆಲಕ್ಕೆ ಕೆಡವಿ ಅಮಾನವೀಯವಾಗಿ ಥಳಿಸಿದ್ದಾರೆ. ಈ ದೃಶ್ಯಗಳು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಯುವಕನ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ಕೂಡಲೇ ಅಲರ್ಟ್ ಆದ ಪೊಲೀಸರು 8 ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಹೊರಕ್ಕೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೊಂದು ಘಟನೆ ನಡೆದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...