HomeKarnatakaBIG NEWS : ರಾಜ್ಯದಲ್ಲಿ ಕೊರೊನಾ ಭೀತಿ : ನಾಳೆ ತಾಂತ್ರಿಕ ಸಲಹಾ ಸಮಿತಿ ಜೊತೆ...

BIG NEWS : ರಾಜ್ಯದಲ್ಲಿ ಕೊರೊನಾ ಭೀತಿ : ನಾಳೆ ತಾಂತ್ರಿಕ ಸಲಹಾ ಸಮಿತಿ ಜೊತೆ ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಭೀತಿ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಸಕಲ ಸಿದ್ದತೆ ಕೈಗೊಂಡಿದೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ ನೀಡಿದೆ.

ಕೋವಿಡ್ ಆತಂಕದ ಹಿನ್ನೆಲೆ ತಾಂತ್ರಿಕ ಸಲಹಾ ಸಮಿತಿ ಜೊತೆ ನಾಳೆ ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವರು ತಾಂತ್ರಿಕ ಸಲಹಾ ಸಮಿತಿ ಜೊತೆ ನಾಳೆ ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಸಭೆ ನಡೆಸಲಿದ್ದಾರೆ, ಈ ವೇಳೆ ನಾವು ಹಲವು ವಿಚಾರಗಳು, ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟಿಂಗ್ ದರ ನಿಗದಿ ಬಗ್ಗೆ ನಾಳೆ ಚರ್ಚೆ ಮಾಡಲಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋವಿಡ್ ಮಾರ್ಗಸೂಚಿ, ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವುದು ಸೇರಿದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಾಳೆ ಚರ್ಚೆ ನಡೆಸಲಾಗುತ್ತದೆ ಎಂದಿದ್ದಾರೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular