HomeKarnatakaBIG NEWS : ದೇಶದಲ್ಲಿ ಒಟ್ಟು 20 ಕೊರೊನಾ JN1 ಪ್ರಕರಣ ದಾಖಲು : ಸಚಿವ...

BIG NEWS : ದೇಶದಲ್ಲಿ ಒಟ್ಟು 20 ಕೊರೊನಾ JN1 ಪ್ರಕರಣ ದಾಖಲು : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ದೇಶದಲ್ಲಿ 20 ಕೊರೊನಾ ಜೆಎನ್1 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇಂದು ಕೇಂದ್ರ ಆರೋಗ್ಯ ಮುನ್ಸುಖ್ ಮಾಂಡವೀಯ ಜೊತೆ ಸಭೆ ನಡೆಸಿದ ಸಚಿವರು ನಂತರ ಮಾಹಿತಿ ನೀಡಿದರು.
ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು. ಹೈರಿಸ್ಕ್ ದೇಶಗಳಿಂದ ಬರುವವರಿಗೆ ಸದ್ಯಕ್ಕೆ ಸ್ಕ್ರೀನಿಂಗ್ ಇಲ್ಲ. ಕೋವಿಡ್ ಲಕ್ಷಣವಿದ್ದರೆ ಮಾತ್ರ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಕೇರಳ ಗಡಿಯ 4 ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ನಿತ್ಯ ಐದು ಸಾವಿರ ಟೆಸ್ಟಿಂಗ್ ಮಾಡುತ್ತೇವೆ , ಟೆಸ್ಟಿಂಗ್ ಸಂಖ್ಯೆಯನ್ನು ಹೆಚ್ಚಳ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular