HomeIndiaBIG NEWS: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ; ತಕ್ಷಣ ಉನ್ನತ...

BIG NEWS: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ; ತಕ್ಷಣ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದು, ತಕ್ಷಣ ಬರ ಪರಿಹಾರ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕರೆದು, ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಮೊದಲ ಬಾರಿ ಕೇಂದ್ರ ಕೃಷಿ ಸಚಿವಾಲಯಕ್ಕೆ ಸೆ.22ರಂದು ಮನವಿ ಸಲ್ಲಿಸಿತ್ತು. ಕೇಂದ್ರ ಬರ ಅಧ್ಯಯನ ತಂಡ ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular