ರಾಜ್ಯದಲ್ಲಿ ‘ಕೋವಿಡ್’ ತಪಾಸಣೆ ತೀವ್ರಗೊಳಿಸಲು ಕ್ರಮ : ಡಿ.23 ರಿಂದ ಪ್ರತಿದಿನ 5 ಸಾವಿರ ‘ಕೊರೊನಾ ಟೆಸ್ಟಿಂಗ್’

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಪಾಸಣೆ ತೀವ್ರಗೊಳಿಸಲು ರಾಜ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಡಿ.23 ರಿಂದ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ ನಡೆಸಲಿ ನಿರ್ಧರಿಸಿದೆ.

ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಕೋವಿಡ್ ತಪಾಸಣೆ ತೀವ್ರಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶನಿವಾರದಿಂದ ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ. ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕೂಡ ಮನವಿ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read