ಬೆಂಗಳೂರು : 2024-25ರ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರಿ ಶಾಲೆಗಳ ಪಠ್ಯಕ್ರಮದಲ್ಲಿ ಕಲೆ ಮತ್ತು ಸಂಸ್ಕೃತಿ ಅಳವಡಿಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 2024-25ರ ಶೈಕ್ಷಣಿಕ ವರ್ಷದಿಂದ ಕಲೆ ಮತ್ತು ಸಂಸ್ಕೃತಿ ಪಠ್ಯಕ್ರಮದ ಅವಿಭಾಜ್ಯ ಅಂಗವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ರಾಜ್ಯದ ವಿವಿಧ ಭಾಗಗಳ ಕಲೆ, ಸಂಸ್ಕೃತಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಲೆ ಮತ್ತು ಸಂಸ್ಕೃತಿ ಪಠ್ಯದ ಮುಖ್ಯ ಭಾಗವಾಗಬೇಕು. ಮಲೆನಾಡಿನ ಸಂಸ್ಕೃತಿಯನ್ನು ಬಯಲುಸೀಮೆ, ಕರಾವಳಿ ವಿದ್ಯಾರ್ಥಿಗಳು, ಬಯಲುಸೀಮೆಯ ಕಲೆ, ಸಂಸ್ಕೃತಿಯನ್ನು ಇತರೆ ಭಾಗಗಳ ವಿದ್ಯಾರ್ಥಿಗಳು ಕಲಿಯಬೇಕು. ಆಹಾರ ಸಂಸ್ಕೃತಿಯ ಪರಿಚಯವಾಗಬೇಕು. ಹಾಗಾಗಿ ಇಂತಹ ಸಾಂಸ್ಕೃತಿಕ ಪರಿಚಯವನ್ನು ಎಸ್ ಇ ಪಿಯಲ್ಲಿ ಅಳವಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.