ಟೆಲ್ ಅವೀವ್ : ಹಮಾಸ್ ನಿರ್ಮೂಲನೆಯಾಗುವವರೆಗೂ ಹಮಾಸ್ ವಿರುದ್ಧ ಹೋರಾಟವನ್ನು ಮುಂದುವರಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ.
ಹಮಾಸ್ ನಿರ್ಮೂಲನೆ, ನಮ್ಮ ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಝಾದಿಂದ ಬೆದರಿಕೆಯನ್ನು ಕೊನೆಗೊಳಿಸುವುದು ಸೇರಿದಂತೆ ನಾವು ನಿಗದಿಪಡಿಸಿದ ಎಲ್ಲಾ ಉದ್ದೇಶಗಳನ್ನು ಸಾಧಿಸುವವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಬುಧವಾರ ಈಜಿಪ್ಟ್ ರಾಜಧಾನಿ ಕೈರೋಗೆ ಪ್ರಯಾಣಿಸಿದ ನಂತರ ಇಸ್ರೇಲ್ ಪ್ರಧಾನಿಯ ಹೇಳಿಕೆ ಬಂದಿದೆ. ಕೈರೋದಲ್ಲಿ, ಹನಿಯೆಹ್ ಈಜಿಪ್ಟ್ ಗುಪ್ತಚರ ಮುಖ್ಯಸ್ಥ ಅಬ್ಬಾಸ್ ಕಾಮೆಲ್ ಅವರೊಂದಿಗೆ ಗಾಜಾದಲ್ಲಿ ಸಂಭಾವ್ಯ ಕದನ ವಿರಾಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ವರದಿ ಮಾಡಿದೆ.