ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹುಣಸೂರು ಮತ್ತು ಟಿ. ನರಸೀಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಹುಣಸೂರು ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪ್ರಭಾರ ಮುಖ್ಯ ಶಿಕ್ಷಕ ಎಸ್. ಕೃಷ್ಣಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ಟಿ. ನರಸೀಪುರ ತಾಲೂಕಿನ ಕೊಳತ್ತೂರು ಶಾಲೆಯ ಮುಖ್ಯ ಶಿಕ್ಷಕ ಸದಾನಂದಮೂರ್ತಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದಾರೆ. ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹೆಚ್.ಕೆ. ಪಾಂಡು ಅವರು ಆದೇಶಿಸಿದ್ದಾರೆ.