HomeKarnatakaಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಶ್ರೀರಾಮಪುರ ನಿವಾಸಿ ಶರತ್ ಕುಮಾರ್ ಶಿಕ್ಷೆಗೆ ಒಳಗಾದ ಅಪರಾಧಿ. ವಿಪರೀತ ಮಧ್ಯ ಸೇವಿಸುತ್ತಿದ್ದ ಶರತ್ ಕುಮಾರ್ ಕುಡಿಯಲು ಹಣ ಕೊಡುವಂತೆ ತಾಯಿ ಕಾತ್ಯಾಯಿನಿ ಅವರ ಬಳಿ ಬಲವಂತ ಮಾಡುತ್ತಿದ್ದ. ಮದುವೆ ಮಾಡುವಂತೆ ತಾಯಿಗೆ ಪೀಡಿಸುತ್ತಿದ್ದ. ಹಣಕ್ಕಾಗಿ ಮನೆ ಮಾರಾಟ ಮಾಡುವಂತೆ ಒತ್ತಾಯಿಸುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಮಾರಾಟ ಮಾಡಲು ತಾಯಿ ಒಪ್ಪಿರಲಿಲ್ಲ. ಇದರಿಂದ ಆಕ್ರೋಶಗೊಂಡ ಶರತ್ ಕುಮಾರ್ 2018ರ ಜೂನ್ 13ರಂದು ಉಸಿರುಗಟ್ಟಿಸಿ ಕಾತ್ಯಾಯಿನಿ ಅವರನ್ನು ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶರತ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular