ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಅದರಲ್ಲೂ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು ಹೊಂದಿರುವ ರಾಜ್ಯಗಳ ಪಟ್ಟಿಯನ್ನು ಕೇಂದ್ರವು ಇತ್ತೀಚೆಗೆ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 300 ಹೊಸ ಸಕ್ರಿಯ ಪ್ರಕರಣಗಳು ವರದಿಯಾಗಿವೆ.
ಕೋವಿಡ್ -19 ಪ್ರಕರಣಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ. ಸಚಿವಾಲಯವು ಇಡೀ ಪರಿಸ್ಥಿತಿಯನ್ನು ಪರಿಶೀಲಿಸಿದೆ. ನಿನ್ನೆಯವರೆಗೆ ರಾಜ್ಯದಲ್ಲಿ ಕೇವಲ ಐದು ಕೋವಿಡ್ ರೋಗಿಗಳಿದ್ದರು ಮತ್ತು ಅವರೆಲ್ಲರೂ ಹೋಮ್ ಐಸೋಲೇಷನ್ನಲ್ಲಿದ್ದಾರೆ ಎಂದರು.