alex Certify BREAKING : ಡಿ.26 ರಂದು ‘ಯುವನಿಧಿ’ ನೋಂದಣಿಗೆ ಚಾಲನೆ, ಜ.12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಡಿ.26 ರಂದು ‘ಯುವನಿಧಿ’ ನೋಂದಣಿಗೆ ಚಾಲನೆ, ಜ.12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ

ಬೆಂಗಳೂರು : ಡಿ.26 ರಂದು ಯುವನಿಧಿ ನೋಂದಣಿಗೆ ಚಾಲನೆ ನೀಡಲಾಗುತ್ತದೆ ಹಾಗೂ ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಡಿ.26 ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುವನಿಧಿ ನೋಂದಣಿಗೆ ಚಾಲನೆ ನೀಡಲಿದ್ದಾರೆ, ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳ ಪೈಕಿ ಕರ್ನಾಟಕ ಯುವನಿಧಿ ಯೋಜನೆ ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಯೋಜನೆಯಾಗಿದೆ.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ.

ಯುವ ನಿಧಿ ಯೋಜನೆಯಲ್ಲಿ ಎಷ್ಟು ಹಣ ಸಿಗುತ್ತೆ..?

ಡಿಗ್ರೀ ಉತ್ತೀರ್ಣರಾದ ನಿರುದ್ಯೋಗಿಗಳಿಗೆ: ಮಾಸಿಕ 3000ರೂ.
ಡಿಪ್ಲೊಮಾ ಉತ್ತೀರ್ಣರಾದ ನಿರುದ್ಯೋಗಿಗಳಿಗೆ: ಮಾಸಿಕ 1500ರೂ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು
ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ
ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ
ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ)
ಬ್ಯಾಂಕ್ ಖಾತೆ ವಿವರ
ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

ಯಾರು ಅರ್ಹರು.?

2022-23ನೇ ಸಾಲಿನಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿದವರು ಅರ್ಹರಾಗಿರುತ್ತಾರೆ. ಆದರೇ ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರಿಗೆ ಮಾತ್ರ ಈ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಯೋಜನೆಯೆ ಮೊದಲ ಕಂತಿನ ಹಣ 2024 ರ ಜನವರಿ ತಿಂಗಳಿಂದಲೇ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಇದು 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ಅನ್ವಯವಾಗಲಿದೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...