ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆಗೆ ಮಾಸ್ಕ್ ಹಾಕಿಕೊಂಡು ಬರುವ ಮೂಲಕ ಎಲ್ಲರೂ ಮಾಸ್ಕ್ ಧರಿಸಬೇಕೆಂಬ ಮಹತ್ವದ ಸಂದೇಶ ರವಾನಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಿರಿಯ ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದಾರೆ.