ನವದೆಹಲಿ : ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ಮತ್ತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 146 ಕ್ಕೆ ಏರಿದೆ.
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸೇರಿದಂತೆ ಮತ್ತೆ ಮೂವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉಭಯ ಸದನಗಳಲ್ಲಿ ಇದುವರೆಗೆ ಒಟ್ಟು 146 ಸಂಸದರು ಅಮಾನತಾಗಿದ್ದಾರೆ.
ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಯಮ ಮೀರಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಮತ್ತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 146 ಕ್ಕೆ ಏರಿದೆ.