ಬೆಂಗಳೂರು : ನೆಲಮಂಗಲದಲ್ಲಿ ಭೀಕರ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ನೆಲಮಂಗಲದ ವಾಜರಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಪೋಟದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ವಿಜಯಮ್ಮ ಎಂಬುವವರ ಮನೆಯ ಮೂರನೇ ಮಹಡಿಯಲ್ಲಿ ಸ್ಪೋಟ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪೋಟದ ತೀವ್ರತೆಗೆ ಮನೆಯ ವಸ್ತು ಬಿರುಕು ಬಿಟ್ಟಿದ್ದು, ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.